ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬೇರೆ ಯಾವುದೇ ಪಕ್ಷಕ್ಕೆ ನೆಲೆಯಿಲ್ಲ. ಪಕ್ಷ ಮತ್ತು ದೀದಿ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. 2024ರಲ್ಲಿ ದೆಹಲಿಯಲ್ಲಿ ನಾವು ಸರ್ಕಾರ ರಚಿಸುತ್ತೇವೆ ಎಂದು ಮುಖ್ಯಮಂತ್ರಿಮಮತಾ ಬ್ಯಾನರ್ಜಿ ಅವರ ಸಹೋದರ ಕಾರ್ತಿಕ್ ಬ್ಯಾನರ್ಜಿ ತಿಳಿಸಿದ್ದಾರೆ.

ಭವಾನಿಪುರ ಉಪಚುನಾವಣೆ ಫಲಿತಾಂಶ ಬಂದ ಬಳಿಕ ಪ್ರತಿಕ್ರಿಯಿಸಿರುವ ಕಾರ್ತಿಕ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವುದಾಗಿ 'ಎಎನ್ಐ' ವರದಿ ಮಾಡಿದೆ.

ಭವಾನಿಪುರ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ವಿರುದ್ಧ 58 ಸಾವಿರ ಮತಗಳ ಅಂತರದಿಂದ ಜಯಗಳಿಸಿದರು. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಎದುರಾಗಿದ್ದ ತೊಡಕನ್ನು ನಿವಾರಿಸಿಕೊಂಡಿದ್ದಾರೆ.

ಭವಾನಿಪುರ ಉಪಚುನಾವಣೆ: ಮಮತಾ ಬ್ಯಾನರ್ಜಿಗೆ 58 ಸಾವಿರ ಮತಗಳ ಅಂತರದ ಜಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.