ʼನಮ್ಮ ಪಕ್ಷದಲ್ಲಿರುವ ಎರಡೂ ಬಣಗಳು ಒಂದಾದರೆ ಮಾತ್ರ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ಅದನ್ನು ಬಿಟ್ಟು ಮೂರನೇ ವ್ಯಕ್ತಿಯನ್ನು ಕಣಕ್ಕಿಳಿಸುತ್ತೇವೆ ಎಂದರೆ ಗೆಲ್ಲಲು ಸಾಧ್ಯವಿಲ್ಲʼ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಬಂದರು. ಪಕ್ಷ ಗೆಲ್ಲಬೇಕು ಎಂಬ ಕಾರಣಕ್ಕೆ ನಾನು ಯಾರನ್ನೂ ವಿರೋಧಿಸಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಯಾರ ವಿರುದ್ಧವೂ ಕೆಲಸ ಮಾಡಿಲ್ಲ. ರಮೇಶ್ ಕುಮಾರ್ ಮತ್ತು ನನ್ನ ಮಧ್ಯೆ ಸಮಸ್ಯೆ ಪರಿಹರಿಸುವಂತೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾನೇ ಮನವಿ ಮಾಡಿದ್ದೆʼ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.