ನವದೆಹಲಿ: ಲೋಕಸಭಾ ಚುನಾವಣೆಗಳು ಸಮೀಪಿಸುತ್ತಿರುವಂತೆಯೇ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ₹ 2 ಇಳಿಕೆ ಮಾಡಿದೆ.

ಈ ಕುರಿತು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಗುರುವಾರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪರಿಷ್ಕೃತ ದರಗಳ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಅನ್ವಯವಾಗಲಿವೆ.

‘ದರಗಳಲ್ಲಿ ಇಳಿಕೆ ನಂತರ, ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ ₹94.72 ಹಾಗೂ ಡೀಸೆಲ್ ದರ ಲೀಟರ್ಗೆ ₹87.62 ಆಗಲಿದೆ’ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಮುಂಬೈನಲ್ಲಿ ವ್ಯಾಟ್ ಹಾಗೂ ಇತರ ತೆರಿಗೆಗಳನ್ನು ವಿಧಿಸಲಾಗುತ್ತಿದೆ. ಹೀಗಾಗಿ, ಪೆಟ್ರೋಲ್ ದರ ಲೀಟರ್ಗೆ ₹106.31 ಇರುವುದು ₹104.21 ಆಗಲಿದ್ದರೆ, ಡೀಸೆಲ್ ದರ ಲೀಟರ್ಗೆ ₹94.27 ಇದ್ದದ್ದು ₹92.15 ಆಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.