ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಇಷ್ಟವಿದೆ ಎಂದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಹಿರಿಯ ನಾಯಕ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

‘ಅವರನ್ನು (ಬಿಜೆಪಿ) ಮೂರ್ಖರ ಸ್ವರ್ಗದಲ್ಲಿ ವಾಸಿಸಲು ಬಿಡಿ. ಪಟ್ನಾ ಸಾಹೀಬ್ನ ಮತದಾರರು ಅವರಿಗೆ ಪಾಠ ಕಲಿಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಒನ್ ಮ್ಯಾನ್ ಆರ್ಮಿ, ಕಾಂಗ್ರೆಸ್ ಸೇರಿದ ಶತ್ರುಘ್ನ ಸಿನ್ಹಾ

‘ಮೋದಿ ಅವರು ಪಟ್ನಾ ಸಾಹೀಬ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಕೆಲ ದಿನಗಳಿಂದ ಹರಿದಾಡುತ್ತಿದೆ. ನಂತರ ಏನಾಯಿತು? ಆ ಕ್ಷೇತ್ರದಲ್ಲಿ ಅವರ ವಿರುದ್ಧ ಸ್ಪರ್ಧಿಸಲು ನನಗೆ ಇಷ್ಟವಿದೆ’ ಎಂದುಶತ್ರುಘ್ನ ಹೇಳಿದ್ದಾರೆ.

ಪಟ್ನಾ ಸಾಹೀಬ್ನ ಹಾಲಿ ಸಂಸದರಾಗಿರುವ ಸಿನ್ಹಾಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿದೆ. ನಂತರ ಪಕ್ಷ ತೊರೆದಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಿದ್ದಾರೆ. ಪಟ್ನಾ ಸಾಹೀಬ್ನಲ್ಲಿ ಬಿಜೆಪಿಯು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ:ತಂದೆ ಆಗಲೇ ಬಿಜೆಪಿಯನ್ನು ತೊರೆಯಬೇಕಾಗಿತ್ತು -ಸೋನಾಕ್ಷಿ ಸಿನ್ಹಾ

ಮೋದಿ ಅವರನ್ನು ಟೀಕಿಸುವ ಮೂಲಕ ಸಿನ್ಹಾ ಹಲವು ಬಾರಿ ಸುದ್ದಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಲವು ದಿನಗಳ ಹಿಂದೆ ಕೋಲ್ಕತ್ತದಲ್ಲಿ ಆಯೋಜಿಸಿದ್ದ ಪ್ರತಿಪಕ್ಷಗಳ ರ್ಯಾಲಿಯಲ್ಲಿ ಭಾಗವಹಿಸುವ ಮೂಲಕ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.