ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ಗರಿಷ್ಠ 10 ವರ್ಷ ಜೈಲು ಹಾಗೂ ₹1 ಕೋಟಿ ವರೆಗೆ ದಂಡ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ 2024 ಅನ್ನು ಲೋಕಸಭೆ ಇಂದು (ಮಂಗಳವಾರ) ಅಂಗೀಕರಿಸಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಹೊಸ ಮಸೂದೆಯನ್ನು ಜಾರಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

ಇತ್ತೀಚೆಗಷ್ಟೇ ಕೇಂದ್ರ ಸಚಿವ ಸಂಪುಟ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ 2024ಕ್ಕೆ ಅನುಮೋದನೆ ನೀಡಿತ್ತು.

ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಈ ಮಸೂದೆಯನ್ನು ಸಿದ್ಧಪಡಿಸಿಲ್ಲ. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಸಂಘಟಿತ ಗುಂಪುಗಳು, ಮಾಫಿಯಾ ಹಾಗೂ ಇವುಗಳೊಂದಿಗೆ ಕೈಜೋಡಿಸುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಮಸೂದೆಯನ್ನು ಮಂಡಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ.

ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿಗಾಗಿ ನಿಗದಿಯಾಗಿದ್ದ ಸಿಇಟಿ, ಹರಿಯಾಣದಲ್ಲಿ ಗ್ರೂಪ್ ಡಿ ಹುದ್ದೆಗಳ ನೇಮಕ, ಗುಜರಾತ್‌ನಲ್ಲಿ ಕಿರಿಯ ಸಹಾಯಕರು ಹಾಗೂ ಬಿಹಾರದಲ್ಲಿ ಕಾನ್‌ಸ್ಟೆಬಲ್‌ಗಳ ನೇಮಕಕ್ಕೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಇತ್ತೀಚೆಗೆ ರದ್ದು ಮಾಡಲಾಗಿತ್ತು. ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಂಡಿಸಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.