ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವ 16 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಮಾಜವಾದಿ ಪಕ್ಷವು (SP) ಸೋಮವಾರ ಅಂತಿಮಗೊಳಿಸಿದೆ. ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಮೈನ್ಪುರಿಯಿಂದ ಸ್ಪರ್ಧಿಸಲಿದ್ದಾರೆ.

ಹಿರಿಯ ರಾಜಕಾರಣಿ 93 ವರ್ಷದ ಶಫಿಕುರ್ ರೆಹಮಾನ್ ಬಾರ್ಕ್ ಅವರು ಸಂಭಾಲ್ನಿಂದ ಮತ್ತು ರವಿದಾಸ್ ಮೆಹರೋತ್ರಾ ಅವರು ಲಖನೌನಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ಹೇಳಿದೆ. ಬಾರ್ಕ್ ಅವರು ಐದು ಬಾರಿ ಸಂಸದರಾಗಿದ್ದಾರೆ.

ಕಳೆದ ಡಿಸೆಂಬರ್ನಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ಮೈನ್ಪುರಿ ಕ್ಷೇತ್ರದಿಂದ ಡಿಂಪಲ್ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಬಿಜೆಪಿಯ ರಘುರಾಜ್ ಸಿಂಗ್ ಶಕ್ಯಾ ಅವರನ್ನು 2.88 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸಿದ್ದು, SP ಆತ್ಮವಿಶ್ವಾಸ ಹೆಚ್ಚಿಸಿತ್ತು.

ಮೈನ್ಪುರಿ ಕ್ಷೇತ್ರವು ಸಮಾಜವಾದಿ ಪಕ್ಷದ ನೆಚ್ಚಿನ ಕ್ಷೇತ್ರವಾಗಿದೆ. ಈ ಮೊದಲು ಪಕ್ಷದ ಮುಖಂಡ ಮುಲಾಯಂಸಿಂಗ್ ಯಾದವ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಕಳೆದ ಅಕ್ಟೋಬರ್ನಲ್ಲಿ ಮುಲಾಯಂ ಅವರ ನಿಧನ ನಂತರ ಈ ಕ್ಷೇತ್ರದಿಂದ ಸ್ಪರ್ಧಿಸುವ ಅವಕಾಶ ಡಿಂಪಲ್ ಅವರಿಗೆ ಲಭಿಸಿದೆ.

ಅಕ್ಷಯ್ ಯಾದವ್ ಅವರನ್ನು ಫಿರೋಜಾಬಾದ್ನಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಬಂದಾ ಕ್ಷೇತ್ರದಿಂದ ಶಿವಶಂಕರ ಸಿಂಗ್ ಪಟೇಲ್ ಸ್ಪರ್ಧಿಸುತ್ತಿದ್ದಾರೆ.

2019ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಬಹುಜನ ಸಮಾಜವಾದಿ ಪಕ್ಷ (BSP)ದೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಆಗ ಸಮಾಜವಾದಿ ಪಕ್ಷವು 3 ಸಂಸದರನ್ನು ಹಾಗೂ ಬಿಎಸ್ಪಿ 10 ಸಂಸದರನ್ನು ಹೊಂದಿತ್ತು. ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಪ್ರತಿನಿಧಿಸುವ ರಾಯಬರೇಲಿಯು ಕಾಂಗ್ರೆಸ್ನ ನೆಚ್ಚಿನ ಕ್ಷೇತ್ರಗಳಲ್ಲಿ ಒಂದು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ SPಯು ಆರ್ಎಲ್ಡಿ ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಜ. 19ರಂದು ಘೋಷಿಸಿದೆ. ಇದರ ಭಾಗವಾಗಿ ಉತ್ತರ ಪ್ರದೇಶದ ಪಶ್ಚಿಮ ಭಾಗದ 7 ಕ್ಷೇತ್ರಗಳನ್ನು ಆರ್ಎಲ್ಡಿಗೆ ಸಮಾಜವಾದಿ ಪಕ್ಷ ಬಿಟ್ಟುಕೊಟ್ಟಿದೆ. ರಾಜ್ಯದಲ್ಲಿರುವ ಒಟ್ಟು 80 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳನ್ನು ಸಮಾಜವಾದಿ ಪಕ್ಷ ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದೆ.

‘ಈ ಬಾರಿಯ ಚುನಾವಣೆಯ ಆರಂಭ ಇಂಡಿಯಾ ಒಕ್ಕೂಟಕ್ಕೆ ಉತ್ತಮವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಇದು ಒಗ್ಗಟ್ಟಿನ ಹೋರಾಟಕ್ಕೆ ಮುನ್ನುಡಿಯಾಗಲಿದೆ. ಕಾಂಗ್ರೆಸ್ಗೆ 11 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಇದು ಉಭಯ ಪಕ್ಷಗಳ ಗೆಲುವಿಗೆ ಸಹಕಾರಿಯಾಗಲಿದೆ. ಚುನಾವಣಾ ಫಲಿತಾಂಶವೂ ಅದರಂತೆಯೇ ಇರಲಿದೆ’ ಎಂದು ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.