ಚಂಡೀಗಡ: 2024ರ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ರೀತಿಯ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವೆ ಅನ್ಮೋಲ್ ಗಗನ್ ಮಾನ್ ಬುಧವಾರ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ವಿರೋಧ ಪಕ್ಷಗಳು 'ಇಂಡಿಯಾ' ಮೈತ್ರಿಕೂಟ ರಚಿಸಿವೆ. ಆದರೆ ರಾಜ್ಯದಲ್ಲಿ ಯಾವುದೇ ರೀತಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವೆ ಹೇಳಿದ್ದಾರೆ.

ಕಾಂಗ್ರೆಸ್‌ನೊಂದಿಗೆ ಎಎಪಿ ಪಕ್ಷವು ಸೀಟು ಹಂಚಿಕೊಳ್ಳುವುದಿಲ್ಲ. ಪಕ್ಷವು ಎಲ್ಲ 13 ಲೋಕಸಭೆ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಿಂದ ದೇಶವನ್ನು ಉಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹೊಂದಾಣಿಕೆಗಾಗಿ ಪಕ್ಷದ ನಾಯಕತ್ವವು ತೀರ್ಮಾನ ಕೈಗೊಂಡಿದೆ. ಆದರೆ ಪಂಜಾಬ್‌ನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಷ್ಟ್ರಮಟ್ಟದಲ್ಲಿ ಪರಿಸ್ಥಿತಿ ಭಿನ್ನವಾಗಿದೆ. ಆದರೆ ರಾಜ್ಯದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಭಗವಂತ ಮಾನ್ ಮುಂದಾಳತ್ವದಲ್ಲಿ ಎಎಪಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.