ಡಿಯೋರಿಯಾ (ಉ.ಪ್ರದೇಶ): ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು (ಶನಿವಾರ) ಬೆಳಿಗ್ಗೆ 4 ಗಂಟೆ ಸುಮಾರಿಗೆ ಭಲುನಿ ಪೊಲೀಸ್ ಠಾಣಾ ವ್ಯಾಪ್ತಿಯ ಡುಮ್ರಿ ಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

‘ಆರತಿ ದೇವಿ ಅವರು ಟೀ ತಯಾರಿಸುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿಧಿವಿಜ್ಞಾನ ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ ಆರತಿ ದೇವಿ (41), ಇಬ್ಬರು ಹೆಣ್ಣು ಮಕ್ಕಳಾದ ಆಂಚಲ್ (14), ಸೃಷ್ಠಿ (11) ಮತ್ತು ಮಗ ಕುಂದನ್ (12) ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.