ನವದೆಹಲಿ: ಉತ್ತರ ಪ್ರದೇಶದ ರಾಯ್ಬರೇಲಿ ಹಾಗೂ ಅಮೇಠಿ ಕ್ಷೇತ್ರದ ಅಭ್ಯರ್ಥಿಗಳು ಯಾರೆಂಬ ಕುತೂಹಲಕ್ಕೆ ಕಾಂಗ್ರೆಸ್ ಶುಕ್ರವಾರ ತೆರೆ ಎಳೆದಿದೆ.

ರಾಯ್ಬರೇಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಅವರ ತಾಯಿ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಕೇರಳದ ವಯನಾಡ್ನಿಂದಲೂ ರಾಹುಲ್ ಗಾಂಧಿ ಅವರು ಸ್ಪರ್ಧೆ ಮಾಡಿದ್ದು, ಅಲ್ಲಿ ಏಪ್ರಿಲ್ 26ರಂದು ಮತದಾನ ನಡೆದಿದೆ.
.ಗಾಂಧಿ ಕುಟುಂಬದೊಂದಿಗೆ ರಾಯ್ಬರೇಲಿ ಕ್ಷೇತ್ರ: ಕಾಂಗ್ರೆಸ್ನ ಅಜಯ್ ರಾಯ್.
2004ರಿಂದ ಸೋನಿಯಾ ಗಾಂಧಿ ಅವರು ಈ ಕ್ಷೇತ್ರದಿಂದ ಸಂಸದರಾಗಿದ್ದಾರೆ. ಈ ಬಾರಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಅಮೇಠಿಯಿಂದ ಕಿಶೋರಿಲಾಲ್ ಶರ್ಮಾಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇವರು ಗಾಂಧಿ ಕುಟುಂಬಕ್ಕೆ ಆಪ್ತರು.

2019ರ ಚುನಾವಣೆಯಲ್ಲಿ ಅಮೇಠಿ ಹಾಗೂ ವಯನಾಡ್ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ವಯನಾಡ್ನಲ್ಲಿ ಭಾರಿ ಅಂತರದಿಂದ ಗೆದ್ದು, ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋಲನುಭವಿಸಿದ್ದರು.

2004ರಿಂದ 20119ರವರೆಗೆ ಅವರು ಅಮೇಠಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು.
.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ.
ಎರಡೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕೊನೆಯ ದಿನವಾಗಿದ್ದು, ಉಭಯ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿದ್ದಾರೆ.

ಮೇ 20ರಂದು ಈ ಕ್ಷೇತ್ರಗಳಿಗೆ ಮತನದಾ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.