ತಿರುವನಂತಪುರಂ: ಕೇರಳದ ಇನ್ನುಳಿದ ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳನ್ನು ಘೋಷಿಸಿದ್ದು, ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ವಿರುದ್ಧ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ.

ಶಬರಿಮಲೆ ದೇವಸ್ಥಾನದೊಳಗೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆದಿದ್ದ ಉಗ್ರ ಹೋರಾಟದ ನೇತೃತ್ವ ವಹಿಸಿದ್ದವರು ಸುರೇಂದ್ರನ್. ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸುರೇಂದ್ರನ್, 2019ರಲ್ಲಿ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. 2016ರಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ 89 ಮತಗಳ ಅಂತರದಿಂದ ಸೋತಿದ್ದರು. ಕೊನ್ನಿ ಕ್ಷೇತ್ರದ ಉಪಚುನಾವಣೆಯಲ್ಲಿಯೂ ಸ್ಪರ್ಧಿಸಿ ಪರಾಭವಗೊಂಡಿದ್ದರು. 2020ರಿಂದ ಅವರು ಕೇರಳ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದಾರೆ.

ದಶಕಗಳ ಕಾಲದಿಂದಲೂ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಎಂ ನೇತೃತ್ವದ ಎಲ್‌ಡಿಎಫ್ ನಡುವೆ ನೇರ ಹಣಾಹಣಿಯಿದ್ದು, ಈ ಬಾರಿ ಅದನ್ನು ತ್ರಿಕೋನ ಸ್ಪರ್ಧೆಯನ್ನಾಗಿ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ.

ವ ಯನಾಡ್ ಅಭಿವೃದ್ಧಿಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಹುಲ್ ಗಾಂಧಿ ಕ್ಷೇತ್ರಕ್ಕಾಗಿ ಏನೂ ಮಾಡಿಲ್ಲ. ಅವರಿಗೆ ಅಮೇಠಿಯಲ್ಲಿ ಒದಗಿದ್ದ ಗತಿಯೇ ಇಲ್ಲೂ ಒದಗಲಿದೆ.
ಕೆ.ಸುರೇಂದ್ರನ್ ವಯನಾಡ್ ಬಿಜೆಪಿ ಅಭ್ಯರ್ಥಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.