ನಂದುರ್ಬಾರ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಮುಂಬೈನಲ್ಲಿ ನಡೆದ ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಸ್ ಆಘಾಡಿ (ಎಂವಿಎ) ಸಭೆಯಲ್ಲಿ ಅಂತಿಮ ನಿರ್ಣಯಕ್ಕೆ ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ತಿಳಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್, ಶಿವಸೇನಾ (ಉದ್ಧವ್ ಬಣ), ಎನ್ಸಿಪಿ (ಶರದ್ ಪವಾರ್ ಬಣ) ಹಾಗೂ ವಂಚಿತ್ ಬಹುಜನ ಆಘಾಡಿ ನಾಯಕರಾದ ಬಾಳಾಸಾಹೇಬ್ ತೋರಟ್, ಉದ್ಧವ್ ಠಾಕ್ರೆ, ಶರದ್ ಪವಾರ್ ಮತ್ತು ಪ್ರಕಾಶ್ ಅಂಬೇಡ್ಕರ್ ಭಾಗಿಯಾಗಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್ನಲ್ಲಿ ವಂಶಪಾರಂಪರ್ಯ ರಾಜಕಾರಣ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿದ ಪಟೋಲೆ, ‘ಅಮಿತ್ ಶಾ ಪುತ್ರ ಕ್ರಿಕೆಟ್ ಮಂಡಳಿಯ ಪದಾಧಿಕಾರಿಯಾಗಿರುವಾಗ ಗಾಂಧಿ ಕುಟುಂಬದ ಬಗ್ಗೆ ಅವರು ಹೇಗೆ ಬೊಟ್ಟು ಮಾಡುತ್ತಾರೆ’ ಎಂದು ಪ್ರಶ್ನಿಸಿದರು.

'ರಾಹುಲ್ ಗಾಂಧಿ ಅವರ ಕುಟುಂಬಸ್ಥರು ಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ಸದ್ಯ ರಾಹುಲ್ ಸಹ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸುತ್ತಾರೆ. ಆದರೆ ಅವರು (ಬಿಜೆಪಿ) ಏನು ಮಾಡಿದ್ದಾರೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.