ಕನೌಜ್: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಕನೌಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗುರುವಾರ ನಾಮಪತ್ರ ಸಲ್ಲಿಸಿದರು.

ರಾಮ್ ಗೋಪಾಲ್ ಯಾದವ್ ಸೇರಿದಂತೆ ಪಕ್ಷದ ಮುಖಂಡರ ಸಮ್ಮುಖದಲ್ಲಿ ಅವರು ನಾಮಪತ್ರ ಸಲ್ಲಿಸಿದರು.

‘ಪಕ್ಷದ ಕಾರ್ಯಕರ್ತರ ಆಗ್ರಹದಂತೆ ಕನೌಜ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಇಲ್ಲಿನ ಜನರು ಆಶೀರ್ವದಿಸುತ್ತಾರೆಂಬ ವಿಶ್ವಾಸವಿದೆ’ ಎಂದು ನಾಮಪತ್ರ ಸಲ್ಲಿಸಿದ ಬಳಿಕ ಅಖಿಲೇಶ್ ತಿಳಿಸಿದರು. ‘ಬಿಜೆಪಿಯ ಋಣಾತ್ಮಕ ರಾಜಕೀಯ ಮತ್ತು ಅದರ ಕಾರ್ಯವೈಖರಿಯನ್ನು ಜನರು ಇಷ್ಟಪಡುವುದಿಲ್ಲ’ ಎಂದೂ ಹೇಳಿದರು.

ಸಮಾಜವಾದಿ ಪಕ್ಷವು ಈ ಕ್ಷೇತ್ರಕ್ಕೆ ಸೋಮವಾರ ತೇಜ್ ಪ್ರತಾಪ್ ಯಾದವ್ ಅವರ ಹೆಸರನ್ನು ಘೋಷಿಸಿತ್ತು. ಆದರೆ ಬುಧವಾರ ತನ್ನ ನಿರ್ಧಾರ ಬದಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.