ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಶುಕ್ರವಾರ ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿ ಸ್ಟಾಲಿನ್ ಜೊತೆಗೆ 33 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ಕೋವಿಡ್ ಮಾರ್ಗಸೂಚಿಗೆ ಅನುಸಾರವಾಗಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದರು.

ಇದನ್ನೂ ಓದಿ:ಸ್ಟಾಲಿನ್ ಸಂಪುಟಕ್ಕೆ ಅನುಭವಿಗಳು ಹಾಗೂ ಹೊಸಬರ ಆಯ್ಕೆ

ಇದೇ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ 68 ವರ್ಷದ ಸ್ಟಾಲಿನ್ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷ ವಿಜಯ ದಾಖಲಿಸಿತ್ತು.

ಮೈತ್ರಿಕೂಟ ಪಕ್ಷವಾದ ಕಾಂಗ್ರೆಸ್ನ ಪಿ. ಚಿದಂಬರಂ, ಎಂಡಿಎಂಕೆ ನಾಯಕ ವೈಕೊ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಎಐಎಡಿಎಂಕೆ ಮುಖಂಡ ಒ. ಪನ್ನೀರ್ಸೆಲ್ವಂ ಸಹ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.