ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ ಸಿಂಗ್ ಚೌಹಾಣ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಶರ್ಮಾ ವಿರುದ್ಧ 1,04,974 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸೋತಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಪಕ್ಷದ ಸೋಲಿನ ಬಗ್ಗೆ ಅವಲೋಕನ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ನಾಯಕ ಕಮಲನಾಥ್ ಹೇಳಿದ್ದಾರೆ.
ಚುನಾವಣೆಯಲ್ಲಾದ ಲೋಪದೋಷಗಳನ್ನು ವಿಶ್ಲೇಷಿಸುತ್ತೇವೆ. ಜತೆಗೆ, ನಮ್ಮ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವು ವಿಫಲರಾಗದ್ದೇವೆ. ಎಲ್ಲರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಕಮಲನಾಥ್ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿಯು ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 230 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 164 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ 65ರಲ್ಲಿ ಗೆದ್ದರೆ, ಭಾರತ್ ಆದಿವಾಸಿ 1 ಸ್ಥಾನ ಗೆದ್ದಿದೆ. ಬಹುಮತಕ್ಕೆ 116.
ಸಿಎಂ ಶಿವರಾಜ್ ಸಿಂಗ್ ಚೌಹಾಣ್‌ಗೆ ಗೆಲುವು:
ಹಾಲಿ ಮುಖ್ಯಮಂತ್ರಿ ಮತ್ತು ಬುಧ್ನಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿಕ್ರಮ್ ಶರ್ಮಾ ಅವರನ್ನು 64,951 ಮತಗಳ ಅಂತರದಿಂದ ಸೋಲಿಸಿದ್ದಾರೆ.