ಸಾಗರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಸಾಗರ್ ಪ್ರದೇಶದಲ್ಲಿ ಕಂಟೈನರ್ ಟ್ರಕ್‌ನಿಂದ ₹11 ಕೋಟಿ ರೂಪಾಯಿ ಮೌಲ್ಯದ ಸುಮಾರು 1,500 ಐಫೋನ್‌ಗಳನ್ನು ಲೂಟಿ ಮಾಡಲಾಗಿದೆ. ಈ ಸಂಬಂಧ ಕರ್ತವ್ಯ ಲೋಪದ ಆರೋಪದ ಮೇಲೆ ಪೋಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಬ್ಬರು ಗಸ್ತು ಪೊಲೀಸ್ ಅಧಿಕಾರಿಗಳನ್ನು ವಜಾ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಟ್ರಕ್ ಚಾಲಕನಿಗೆ ಆ.15 ರಂದು ಮಾದಕ ದ್ರವ್ಯ ನೀಡಿ ಫೋನ್‌ಗಳನ್ನು ಲೂಟಿ ಮಾಡಲಾಗಿದೆ. ಫೋನ್ ತಯಾರಿಸುವ ಆ್ಯಪಲ್ ಕಂಪೆನಿ ಇದುವರೆಗೆ ಪೊಲೀಸರನ್ನು ಸಂಪರ್ಕಿಸಿಲ್ಲ. ಕಳ್ಳರ ಪತ್ತೆಹಚ್ಚುವ ಕೆಲಸ ಪ್ರಗತಿಯಲ್ಲಿದೆ ಎಂದು ಸಾಗರ್ ಪ್ರದೇಶದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂಜಯ್ ಉಯಿಕೆ ಪಿಟಿಐಗೆ ತಿಳಿಸಿದ್ದಾರೆ.

ಕಂಟೈನರ್ ಹರಿಯಾಣದ ಗುರುಗ್ರಾಮ್‌ನಿಂದ ಚೆನ್ನೈಗೆ ತೆರಳುತ್ತಿದ್ದ ವೇಳೆ ನರಸಿಂಗ್‌ಪುರ ಜಿಲ್ಲೆಯಲ್ಲಿ ಲೂಟಿ ಮಾಡಲಾಗಿದೆ. ಪ್ರಾಥಮಿಕ ತನಿಖೆ ಪೂರ್ಣಗೊಂಡ ನಂತರ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಉಯಿಕೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.