ಚೆನ್ನೈ: ಆದಾಯಕ್ಕೆ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅಪರಾಧಿ ಎಂದು ಮದ್ರಾಸ್ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಪೊನ್ಮಡಿ ನಿರ್ದೋಷಿ ಎಂದು ವಿಚಾರಣಾ ನ್ಯಾಯಾಲಯ 2016ರ ಏಪ್ರಿಲ್ 18ರಂದು ನೀಡಿದ್ದ ಆದೇಶವನ್ನು ನ್ಯಾಯಮೂರ್ತಿ ಜಿ.ಜಯಚಂದ್ರನ್ ವಜಾಗೊಳಿಸಿದ್ದಾರೆ. ಶಿಕ್ಷೆ ಪ್ರಮಾಣವನ್ನು ಡಿ.21ರಂದು ಪ್ರಕಟಿಸಲಾಗುವುದು. ಅಂದು, ಪೊನ್ಮುಡಿ ಹಾಗೂ ಅವರ ಪತ್ನಿ ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

ಮೇಲ್ಮನವಿ ಸಲ್ಲಿಸಲು ಅನುಕೂಲವಾಗಲು ತೀರ್ಪನ್ನು ಅಮಾನತಿನಲ್ಲಿಡಬೇಕು ಎಂದು ಪೊನ್ಮುಡಿ ಪರ ವಕೀಲರು ಮನವಿ ಮಾಡಿದ್ದು, ಈ ಕುರಿತು 21ರಂದು ತೀರ್ಮಾನ ಪ್ರಕಟಿಸಲಾಗುವುದು ಎಂದೂ ನ್ಯಾಯಮೂರ್ತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.