ಬರೇಲಿ (ಉತ್ತರ ಪ್ರದೇಶ): ‘ಮದರಸಾಗಳೇ ಲವ್ ಜಿಹಾದ್ ಕೇಂದ್ರಗಳಾಗಿವೆ. ಇವುಗಳೇ ಜಾಗತಿಕ ಸಂಘರ್ಷಕ್ಕೂ ಕಾರಣ. ಹೀಗಾಗಿ ದೇಶದಲ್ಲಿರುವ ಎಲ್ಲ ಮದರಸಾಗಳನ್ನು ಮುಚ್ಚಬೇಕು’ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೂಗಳು ಸಂಪತ್ತು ಗಳಿಸುವ ಬಗ್ಗೆ ಮಾತ್ರ ಯೋಚಿಸುತ್ತಾರೆ. ಆದರೆ, ಒಂದು ವಿಶೇಷ ಸಮುದಾಯ ಇಡೀ ಭಾರತವನ್ನು ಆಳಬೇಕು ಎಂದು ಯೋಚಿಸುತ್ತದೆ. ಸಾವಿರಾರು ವರ್ಷಗಳಿಂದಲೂ ಇದು ಅವರ ಕಾರ್ಯಸೂಚಿಯಾಗಿದೆ’ ಎಂದರು.

‘ಲವ್ ಜಿಹಾದ್ ಬಗ್ಗೆ ಮದರಸಾಗಳಲ್ಲಿ ಮಾಹಿತಿ ನೀಡಲಾಗುತ್ತದೆ. ಈ ಕಾರಣಕ್ಕಾಗಿಯೇ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ. ಮದರಸಾಗಳನ್ನು ಮುಚ್ಚಿದ ದಿನವೇ ಲವ್ ಜಿಹಾದ್ ಕೂಡ ನಿಲ್ಲುತ್ತದೆ. ಆಗ ಭಾರತದಲ್ಲಿ ಮಾತ್ರವಲ್ಲ, ಇಡೀ ಜಗತ್ತಿನಲ್ಲಿ ಶಾಂತಿ–ಸೌಹಾರ್ದ ನೆಲೆಸುತ್ತದೆ’ ಎಂದು ಹೇಳಿದರು.

‘ದೇವಭೂಮಿಯಲ್ಲಿ (ಉತ್ತರಾಖಂಡ) ಹಿಂದೂಯೇತರರ ಸಂಖ್ಯೆ ಹೆಚ್ಚುತ್ತಿದ್ದು, ಹಿಂದೂಗಳು ವಲಸೆ ಹೋಗುತ್ತಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕ್ರಮಕೈಗೊಳ್ಳಬೇಕು’ ಎಂದರು.

‘ಉತ್ತರಾಖಂಡದಲ್ಲಿ ಅಕ್ರಮ ಗೋರಿಗಳನ್ನು ಧ್ವಂಸ ಮಾಡಲಾಗುತ್ತಿದೆಯೇ ಹೊರತು, ಯಾವುದೇ ಮಸೀದಿಯನ್ನು ನೆಲಸಮ ಮಾಡಿಲ್ಲ. ರಾಜ್ಯದಲ್ಲಿ ಅಕ್ರಮವಾಗಿ ನಿರ್ಮಿಸಲಾಗುತ್ತಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುವುದನ್ನು ಬಿಡಬೇಕು. ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಆಗುವುದಿಲ್ಲ, ದೇಶದ ಪ್ರಧಾನಿಯೂ ಆಗುವುದಿಲ್ಲ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಗೆದ್ದು ಪ್ರಧಾನಿಯಾಗುವುದು ಖಚಿತ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.