ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಮಾಂತ್ರಿಕತೆಯಿಂದ ರಾಜಸ್ಥಾನದ ಜನರು ಹೊರಬಂದಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಟೀಕಿಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆಯು ಬಾರಿ ಬಿರುಸಿನಿಂದ ಸಾಗಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಮಾತನಾಡಿರುವ ಶೇಖಾವತ್, ‘ಗೆಹಲೋತ್ ಅವರ ಜಾದೂ ಮುಗಿದಿದೆ, ರಾಜಸ್ಥಾನವು ಜಾದೂಗಾರನ ಕಾಟದಿಂದ ಹೊರಬಂದಿದೆ. ಮಹಿಳೆಯರ ಗೌರವ ಮತ್ತು ಬಡವರ ಕಲ್ಯಾಣಕ್ಕಾಗಿ ಜನರು ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್ ಭರವಸೆಗಳನ್ನು ಜನರು ವಿಫಲಗೊಳಿಸಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಹೊರಹಾಕಲು ಜನರು ಬಿಜೆಪಿಗೆ ಮತ ಹಾಕಿದ್ದಾರೆ. ರಾಜ್ಯದಲ್ಲಿ ಭಾರಿ ಜನಾದೇಶದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ’ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಒಟ್ಟು 199 ಸ್ಥಾನಗಳ ಪೈಕಿ ಬಿಜೆಪಿ 116 ಮತ್ತು ಕಾಂಗ್ರೆಸ್ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.