ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಅವರ ಪುತ್ರ, ಸಂಸದ ಶ್ರೀಕಾಂತ್ ಶಿಂದೆ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಅಪರಾಧ ವಿಭಾಗವು ಪುಣೆಯ 19 ವರ್ಷದ ವಿದ್ಯಾರ್ಥಿಯನ್ನು ಬಂಧಿಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆರೋಪಿಯನ್ನು ಶುಭಂ ವಾರ್ಕಾಡ್ ಎಂದು ಗುರುತಿಸಲಾಗಿದೆ. ನಾಂದೇಡ್ ಜಿಲ್ಲೆಯ ಈತ ಪುಣೆಯಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು ಫೆ.11ರಂದು ಏಕನಾಥ ಶಿಂದೆ ಮತ್ತು ಅವರ ಪುತ್ರ ಶ್ರೀಕಾಂತ್ ಶಿಂದೆ ಅವರಿಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಕೊಲೆ ಬೆದರಿಕೆ ಹಾಕಿದ್ದ. ತಕ್ಷಣವೇ ಕಾರ್ಯಪ್ರವೃತರಾದ ಮುಂಬೈ ಅಪರಾಧ ವಿಭಾಗದ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಜಿ-ಮೇಲ್ ಐಡಿ, ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 506(2) ಮತ್ತು 505(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.