ಅಮರಾವತಿ: ಕಾರಿಗೆ ಟ್ರಕ್ ಡಿಕ್ಕಿಯಾದ ಪರಿಣಾಮ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಒಂದೇ ಕುಟುಂಬದ ಐವರು ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂದಗಾಂವ್ಪೇಟ್-ದೇವಲಗಾಂವ್ ರಿಂಗ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಟ್ರಕ್ನ ಎರಡು ಚಕ್ರಗಳು ಕಳಚಿಕೊಂಡಿವೆ ಎಂದು ತಿಳಿಸಿದ್ದಾರೆ.

ಅಂಜನಗಾಂವ್ ಸುರ್ಜಿ ಗ್ರಾಮದ ಕುಟುಂಬ ವಾಲ್ಗಾಂವ್ ಮಾರ್ಗದ ಮೂಲಕ ನಂದಗಾಂವ್ಪೇಟ್ನಲ್ಲಿ ಮದುವೆಯಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳುತ್ತಿತ್ತು. ಪೋಟೆ ಕಾಲೇಜು ಬಳಿ ಕಾರಿನ ಚಾಲಕ ದ್ವಿಚಕ್ರ ವಾಹನವನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದಾಗಿ ವಿದ್ಯುತ್ ಕಂಬ ತುಂಡಾಗಿ ಪಕ್ಕದ ರಸ್ತೆಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲೇ ಇದ್ದ ಕೆಲವು ಕಾರ್ಮಿಕರು ಕಾರಿನಲ್ಲಿದ್ದ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೂಡ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.