ಮುಂಬೈ: ಮಹಾರಾಷ್ಟ್ರದಲ್ಲಿ ಚುನಾವಣೆ ಮಾದರಿ ನೀತಿಸಂಹಿತೆ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 6,382 ದೂರುಗಳನ್ನು ದಾಖಲಿಸಿಕೊಂಡು, ₹ 536 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯದಲ್ಲಿ ಅಕ್ಟೋಬರ್ 15ರಿಂದ ನೀತಿಸಂಹಿತೆ ಜಾರಿಗೆ ಬಂದಿದ್ದು, ಇಲ್ಲಿಯವರೆಗೂ 6,382 ದೂರುಗಳನ್ನು ಸ್ವೀಕರಿಸಲಾಗಿತ್ತು. ರಾಜಕೀಯ ಪಕ್ಷಗಳು, ಮುಖಂಡರು ಮತ್ತು ಕಾರ್ಯಕರ್ತರಿಗೆ ನೋಟಿಸ್ ನೀಡಿ ದೂರಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಲ್ಲಿಯ ತನಕ ₹ 536 ಕೋಟಿ ಮೌಲ್ಯದ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಮದ್ಯ, ಡ್ರಗ್ಸ್, ಲೋಹದ ವಸ್ತುಗಳು, ಬಟ್ಟೆಗಳು, ಗೃಹ ಉಪಯೋಗಿ ಸರಕುಗಳು ಹಾಗೂ ನಗದು ಹಣ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ನ.20ರಂದು ಮತದಾನ ನಡೆಯಲಿದೆ. ನ.23ರಂದು ಫಲಿತಾಂಶ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.