ಪುಣೆ: ನೆಹರು-ಗಾಂಧಿ ಕುಟುಂಬದ ಮೇಲೆ ಅವಹೇಳನಕಾರಿ ವಿಡಿಯೊ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆ ನಗರದ ಸೈಬರ್ ಪೊಲೀಸರು ಬಾಲಿವುಡ್ ನಟಿ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ನಟಿ ವಿರುದ್ಧ ಸೈಬರ್ ಪೊಲೀಸರು ಮಂಗಳವಾರ ಐಪಿಸಿ ಸೆಕ್ಷನ್ 153 (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500 (ಮಾನನಷ್ಟಕ್ಕೆ ಶಿಕ್ಷೆ), 505 (2) (ಕಿಡಿಗೇಡಿತನದ ಸಾರ್ವಜನಿಕ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ನಟಿ ಪಾಯಲ್ ರೋಹಟಗಿ ವ್ಯಕ್ತಿಯೊಂದಿಗೆ ಸೇರಿ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಗಾಂಧಿ ಕುಟುಂಬದ ಇತರ ಸದಸ್ಯರ ಬಗ್ಗೆ ಅವಹೇಳನಕಾರಿ ವಿಡಿಯೊ ಮಾಡಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾದ ವಿಡಿಯೊವನ್ನು ಗಮನಿಸಿ, ಕಾಂಗ್ರೆಸ್ ನಾಯಕಿ ಸಂಗೀತಾ ತಿವಾರಿ ಮತ್ತು ಪಕ್ಷದ ಪುಣೆ ನಗರ ಘಟಕದ ಪದಾಧಿಕಾರಿಗಳು ರೋಹಟಗಿ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಪೊಲೀಸರನ್ನು ಸಂಪರ್ಕಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.