ನವದೆಹಲಿ: ಆಡಳಿತಾರೂಢ ‘ಮಹಾಯುತಿ’ ಹಾಗೂ ವಿಪಕ್ಷ ‘ಮಹಾ ವಿಕಾಸ ಆಘಾಡಿ’ ಮೈತ್ರಿಕೂಟಗಳ ನೇರ ಹಣಾಹಣಿಗೆ ಸಾಕ್ಷಿಯಾಗಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಮತದಾನ ನಡೆಯಲಿದೆ.

ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಿಗೆ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಬುಧವಾರ ಜರುಗಲಿದೆ.

ಎಲ್ಲ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 23ರಂದು ಮಹಾರಾಷ್ಟ್ರ, ಜಾರ್ಖಂಡ್ ಮತ್ತು 46 ವಿಧಾನಸಭಾ ಕ್ಷೇತ್ರಗಳ ಮತ್ತು ಎರಡು ಲೋಕಸಭಾ ಸ್ಥಾನಗಳ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ.

ತಮ್ಮ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಪ್ರಮುಖ ನಾಯಕರಾದ ನರೇಂದ್ರ ಮೋದಿ, ಅಮಿತ್ ಶಾ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಲವು ರ್ಯಾಲಿಗಳಲ್ಲಿ ಭಾಗಿಯಾಗಿ ಮತ ಸೆಳೆಯುವ ಕಸರತ್ತು ನಡೆಸಿದರು. ಲೋಕಸಭಾ ಚುನಾವಣೆಯ ಮಾದರಿಯಲ್ಲೇ ‘ಮಹಾ ಕಣ’ದಲ್ಲಿ ಕಾಂಗ್ರೆಸ್ ಪಕ್ಷವು ‘ಸಂವಿಧಾನ ಉಳಿಸಿ’ ಅಭಿಯಾನ ನಡೆಸಿತು. ಬಿಜೆಪಿಯು ‘ಬಟೋಗೆ ತೊ ಕಟೋಗೆ’ (ಒಗ್ಗಟ್ಟು ಇಲ್ಲದಿದ್ದರೆ ನಮ್ಮನ್ನು ಮುಗಿಸುತ್ತಾರೆ) ನಿರೂಪಣೆ ಮುಂದಿಟ್ಟುಕೊಂಡು ಕಾಂಗ್ರೆಸ್ ತಂತ್ರಗಳಿಗೆ ಪ್ರತಿತಂತ್ರ ಹೂಡುವ ಪ್ರಯತ್ನ ನಡೆಸಿತು. ಕಣದಲ್ಲಿ ಕಮಲ ಪಾಳಯವು ಉಗ್ರ ಹಿಂದುತ್ವ ವಾದದ ಮೊರೆ ಹೋಯಿತು.

ಕಳೆದ ಐದು ವರ್ಷಗಳಲ್ಲಿ ಎರಡೂ ಮೈತ್ರಿಕೂಟಗಳು ಆಡಳಿತ ನಡೆಸಿರುವ ರಾಜ್ಯದಲ್ಲಿ ‘ಪಕ್ಷಾಂತರ’ ವಿಷಯವೇ ಚುನಾವಣಾ ಕಣದಲ್ಲಿ ಸದ್ದು ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮೈತ್ರಿಕೂಟದ ಹಿನ್ನಡೆಗೆ ‘ಪಕ್ಷಾಂತರ’ವೂ ಒಂದು ಕಾರಣ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದ್ದರು. ಕಮಲ ಪಾಳಯವು ಹ್ಯಾಟ್ರಿಕ್ ಗೆಲುವು ಸಾಧಿಸಲು ಅವರು ನೆರವಾಗಿದ್ದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಆರ್ಎಸ್ಎಸ್ ಕಾರ್ಯಕರ್ತರು ಸದ್ದಿಲ್ಲದೆ ಪ್ರಚಾರದಲ್ಲಿ ತೊಡಗಿದ್ದಾರೆ.

ಚುನಾವಣಾ ವರ್ಷದಲ್ಲಿ ಮಹಾಯುತಿ ಮೈತ್ರಿಕೂಟವು ಮಹಿಳಾ ಮತದಾರರನ್ನು ಪ್ರಮುಖವಾಗಿ ಗುರಿಯಾಗಿಸಿಕೊಂಡು ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿತ್ತು. ಈ ಯೋಜನೆಗಳು ಮತ ತಂದುಕೊಡ ಬಲ್ಲವು ಹಾಗೂ ಮತ್ತೆ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ವಿಶ್ವಾಸದಲ್ಲಿ ಮೈತ್ರಿಕೂಟದ ನಾಯಕರು ಇದ್ದಾರೆ.

288 ಕ್ಷೇತ್ರಗಳ ಪೈಕಿ 75 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಜಾತಿ ಆಧಾರಿತ ಜನಗಣತಿ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ರಕ್ಷಣೆಯಂತಹ ವಿಷಯಗಳನ್ನು ’ಕೈ’ ಪಾಳಯ ಚುನಾವಣಾ ಅಸ್ತ್ರ ಮಾಡಿಕೊಂಡು ಪ್ರಚಾರ ನಡೆಸಿದೆ.

2019ರ ರಾಜ್ಯ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಅಭ್ಯರ್ಥಿಗಳ ಸಂಖ್ಯೆ ಶೇ 28ರಷ್ಟು ಹೆಚ್ಚಾಗಿದೆ. 150 ಕ್ಷೇತ್ರಗಳಲ್ಲಿ ಬಂಡಾಯಗಾರರ ಸವಾಲನ್ನು ಉಭಯ ಮೈತ್ರಿಕೂಟಗಳು ಎದುರಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.