ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ 160–165ರಲ್ಲಿ ಮಹಾ ವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟವು ಜಯ ಸಾಧಿಸಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.

ರಾಜ್ಯಸಭೆ ಸದಸ್ಯರೂ ಆಗಿರುವ ರಾವುತ್, ಎಂವಿಎ ಸ್ಥಿರ ಸರ್ಕಾರ ರಚಿಸಲಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ, ಶರದ್ ಪವಾರ್ ಅವರ ಎನ್ಸಿಪಿ ಹಾಗೂ ಕಾಂಗ್ರೆಸ್ ಎಂವಿಎ ಮೈತ್ರಿಕೂಟದಲ್ಲಿವೆ.

ಮಹಾ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಶನಿವಾರ (ನ.23) ಫಲಿತಾಂಶ ಪ್ರಕಟವಾಗಲಿದೆ.

ಬುಧವಾರ ಮತದಾನ ಮುಗಿಯುತ್ತಿದ್ದಂತೆ ಪ್ರಕಟವಾದ ಹಲವು ಚುನಾವಣೋತ್ತರ ಸಮೀಕ್ಷೆಗಳು, ಬಿಜೆಪಿ ನೇತೃತ್ವದ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂದು ಭವಿಷ್ಯ ನುಡಿದಿವೆ.

ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಶಿವಸೇನಾ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ, ಬಿಜೆಪಿಯ ಮಿತ್ರಪಕ್ಷಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.