ಮುಂಬೈ: ವಿರೋಧ ಪಕ್ಷಗಳ ಮೈತ್ರಿಕೂಟ 'ಮಹಾ ವಿಕಾಸ ಆಘಾಡಿ' (ಎಂವಿಎ) ಆಗಸ್ಟ್ 7 ರಂದು ಸಭೆ ಸೇರಲಿದ್ದು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಸೀಟು ಹಂಚಿಕೆ ಹಾಗೂ ಇನ್ನಿತರ ವಿಚಾರಗಳ ಕುರಿತು ಚರ್ಚಿಸಲಿದೆ.

ಕಾಂಗ್ರೆಸ್, ಶಿವಸೇನಾ (ಯುಬಿಟಿ) ಹಾಗೂ ಎನ್ಸಿಪಿ (ಎಸ್ಪಿ) ಎಂವಿಎ ಕೂಟದಲ್ಲಿವೆ.

ಶಿವಸೇನಾ (ಯುಬಿಟಿ) ನಾಯಕ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಬಾಲಾಸಾಹೇಬ್ ಥೋರಟ್, ಮಿತ್ರ ಪಕ್ಷಗಳ ನಡುವಣ ಸೀಟು ಹಂಚಿಕೆ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ.

'ಗೆಲ್ಲುವ ಸಾಧ್ಯತೆಯುಳ್ಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು' ಎಂದೂ ಅವರೂ ಹೇಳಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚೆನ್ನಿತಲ ಅವರು, ಎರಡು ದಿನಗಳ ಭೇಟಿ ಸಲುವಾಗಿ ಆಗಸ್ಟ್ 3ರಂದು ಮುಂಬೈಗೆ ಬರಲಿದ್ದಾರೆ. ಮೈತ್ರಿಕೂಟದ ಸಭೆಗೂ ಮುನ್ನ ಪಕ್ಷದ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಅಕ್ಟೋಬರ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟ ಉತ್ತಮ ಪ್ರದರ್ಶನ ತೋರಿದೆ. ಇಲ್ಲಿನ 48 ಕ್ಷೇತ್ರಗಳ ಪೈಕಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ 17 ಸ್ಥಾನಗಳನ್ನು ಗೆದ್ದಿದ್ದರೆ, ಎಂವಿಎ 30ರಲ್ಲಿ ಜಯ ಸಾಧಿಸಿವೆ. ಮತ್ತೊಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.