ಮುಂಬೈ:ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಸೋಮವಾರ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್, ತಕ್ಷಣವೇ ತನ್ನ ಆದೇಶವನ್ನು 10 ದಿನಗಳವರೆಗೆ ತಡೆ ಹಿಡಿದಿದೆ.

ಎನ್ಸಿಪಿ ನಾಯಕರೂ ಆಗಿರುವ74 ವರ್ಷದ ದೇಶ್ಮುಖ್ ಅವರು ವೈದ್ಯಕೀಯ ಕಾರಣಗಳನ್ನು ಪರಿಗಣಿಸಿ ತಮಗೆ ಜಾಮೀನು ನೀಡುವಂತೆ ಕೋರಿಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕಳೆದ ತಿಂಗಳು ಮನವಿ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ನ್ಯಾಯಾಲಯವು ದೇಶ್ಮುಖ್ ಮನವಿಯನ್ನುತಳ್ಳಿಹಾಕಿತ್ತು. ಇದನ್ನು ಪ್ರಶ್ನಿಸಿ, ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಎಂ.ಎಸ್.ಕಾರಣಿಕ್ ಅವರಿದ್ದ ಏಕ ಸದಸ್ಯ ಪೀಠವು ಕಳೆದ ವಾರ ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕಆದೇಶ ಕಾಯ್ದಿರಿಸಿತ್ತು.

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಕಳೆದ (2021ರ) ನವೆಂಬರ್ನಲ್ಲಿ ಬಂಧಿಸಿದಾಗಿನಿಂದಲೂ ಅವರು ಜೈಲಿನಲ್ಲಿದ್ದಾರೆ. ಈ ವರ್ಷ ಏಪ್ರಿಲ್ನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ.

ದೇಶಮುಖ್ ಅವರಿಗೆ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಕಳೆದ ತಿಂಗಳು ಜಾಮೀನು ಲಭಿಸಿದೆ.

ಮುಂಬೈನ ರೆಸ್ಟೋರೆಂಟ್ ಹಾಗೂ ಬಾರ್ಗಳಿಂದ ಮಾಸಿಕ ₹ 100 ಕೋಟಿ ಸಂಗ್ರಹ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ದೇಶಮುಖ್ ಸೂಚನೆ ನೀಡಿದ್ದರುಎಂದು ಐಪಿಎಸ್ ಅಧಿಕಾರಿ ಪರಮ್ಬೀರ್ ಸಿಂಗ್ 2021ರ ಮಾರ್ಚ್ನಲ್ಲಿ ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ 2021ರ ಏಪ್ರಿಲ್ನಲ್ಲಿ ಸಿಬಿಐಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.