ಮುಂಬೈ:ವೀರ ಸಾವರ್ಕರ್, ಮಹಾತ್ಮ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಭಾರತ ರತ್ನಕ್ಕೆ ಶಿಫಾರಸು ಪ್ರಸ್ತಾವ ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಬಿಜೆಪಿಯ ಮಹಾರಾಷ್ಟ್ರ ಘಟಕ ಮಂಗಳವಾರ ಬಿಡುಗಡೆ ಮಾಡಿದೆ.

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಒಂದು ಕೋಟಿ ಉದ್ಯೋಗ ಸೃಷ್ಟಿ, 2022ರ ವೇಳೆಗೆ ಎಲ್ಲರಿಗೂ ಮನೆ, ಮೂಲಸೌಕರ್ಯ ಕ್ಷೇತ್ರದಲ್ಲಿ ₹ 5 ಲಕ್ಷ ಕೋಟಿ ಹೂಡಿಕೆ, ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಮೌಲ್ಯಾಧಾರಿತ ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಸೇರಿದಂತೆ ಅನೇಕ ಭರವಸೆಗಳನ್ನು ಬಿಜೆಪಿ ನೀಡಿದೆ.

ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.