ಪುಣೆ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಾರಾಮತಿ ಕ್ಷೇತ್ರದಲ್ಲಿ ಚುನಾವಣೆಯ ಕಾವು ಏರಿದೆ. ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಅವರ ತಮ್ಮನ ಮಗ ಯುಗೇಂದ್ರ ಪವಾರ್ (ಪವಾರ್ ಕುಟುಂಬದ 3ನೇ ಪೀಳಿಗೆ) ಅವರ ಮಧ್ಯೆ ನೇರ ಹಣಾಹಣಿ ಏರ್ಪಡುವ ಸಾಧ್ಯತೆ ಇದೆ.

ಎನ್ಸಿಪಿ (ಶರದ್ ಪವಾರ್ ಬಣ) ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ‘ಮಹಾಯುತಿ’ಯ ಭಾಗವಾಗಿರುವ ಎನ್ಸಿಪಿ (ಅಜಿತ್ ಪವಾರ್ ಬಣ) ಸಹ ಇನ್ನಷ್ಟೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿದೆ. ಆದರೆ, ಬಾರಾಮತಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು ಎನ್ನಲಾದ ಅಭ್ಯರ್ಥಿಗಳ ಹೆಸರು ಹರಿದಾಡುತ್ತಿದೆ.

32 ವರ್ಷದ ಯುಗೇಂದ್ರ ಅವರು ಅಜಿತ್ ಪವಾರ್ ಅವರ ಸೋದರ ಶ್ರೀನಿವಾಸ್ ಪವಾರ್ ಅವರ ಪುತ್ರ. ಬೋಸ್ಟನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.

ಬಾರಾಮತಿ ಪವಾರ್ ಕುಟುಂಬದ ಭದ್ರಕೋಟೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.