ಔರಂಗಾಬಾದ್:ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಕಾರ್ಮಿಕರಿಗೆ ಮಧ್ಯಾಹ್ನದ ವೇಳೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಅವರು ಬಿಸಿಯೂಟ ತಯಾರಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಸೋಮವಾರ ನಡೆದ ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಊಟ ಹೇಗಿದೆ ಎಂದು ಪ್ರಶ್ನಿಸಿದ ಬಿಸಿಯೂಟ ತಯಾರಕನಿಗೆಬಂಗಾರ್ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಧ್ಯಾಹ್ನದ ಊಟದ ಯೋಜನೆಗೆ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ. ಇದು ಸರ್ಕಾರದ ಲೂಟಿಯಾಗಿದೆ. ಇಂತಹವರು ಬಡ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

ಬಂಗಾರ್ ಅವರು, ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಶಿವಸೇನಾ ಬಣದಲ್ಲಿದ್ದಾರೆ.

100 ವರ್ಷಗಳ ಹಿಂದೆ ನನ್ನ ತಂದೆಗೆ ನೀರು ಕೊಡಲಿಲ್ಲ, ಇಂದೂ ಅದೇ ಪರಿಸ್ಥಿತಿ: ಮೀರಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.