ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ: ಕೇಂದ್ರ ಸಚಿವ ನಾರಾಯಣ ರಾಣೆ ಪುತ್ರನ ಕಾರಿನ ಮೇಲೆ ಕಲ್ಲು ತೂರಾಟ

Published : 17 ಫೆಬ್ರುವರಿ 2024, 4:29 IST
Last Updated : 17 ಫೆಬ್ರುವರಿ 2024, 4:29 IST
ಫಾಲೋ ಮಾಡಿ
Comments

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರ ಮಾಜಿ ಸಂಸದ ನೀಲೇಶ್ ರಾಣೆ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಬಿಜೆಪಿ ಮತ್ತು ಶಿವಸೇನಾ (ಯುಬಿಟಿ) ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರತ್ನಗಿರಿ ಜಿಲ್ಲೆಯಲ್ಲಿ ಶುಕ್ರವಾರ ಸಾರ್ವಜನಿಕ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನೀಲೇಶ್ ರಾಣೆ ಮತ್ತು ಶಿವಸೇನಾ (ಯುಬಿಟಿ) ನಾಯಕ ಭಾಸ್ಕರ್ ಜಾಧವ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಗುಂಪನ್ನು ಚದುರಿಸಲು ಅಶ್ರುವಾಯು ಸಿಡಿಸಲಾಯಿತು ಎಂದು ಗುಹಾಗರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಕೆಲವು ಕಾರುಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT