ಮೈನ್ಪುರಿ (ಉತ್ತರ ಪ್ರದೇಶ): ಉತ್ತರಪ್ರದೇಶದ ಮೈನ್ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಸಮಾಜವಾದಿ ಪಕ್ಷದ (ಎಸ್ಪಿ) ಅಭ್ಯರ್ಥಿ ಡಿಂಪಲ್ ಯಾದವ್ ಭಾರೀ ಮುನ್ನಡೆ ಸಾಧಿಸಿದ್ದಾರೆ.

ಇದೀಗ ಬಂದ ಮಾಹಿತಿ ಪ್ರಕಾರ ಡಿಂಪಲ್ ಯಾದವ್ ಅವರು ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರಘುರಾಜ್ ಸಿಂಗ್ ಶಾಕ್ಯಾ ವಿರುದ್ಧ 84,251 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಮೈನ್ಪುರಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ-ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಬಿಎಸ್ಪಿ ಹಾಗೂ ಕಾಂಗ್ರೆಸ್ ಈ ಕ್ಷೇತ್ರಗಳಿಂದ ಸ್ಪರ್ಧಿಸಿಲ್ಲ.

ಎಸ್ಪಿ ನಾಯಕ ಮುಲಾಯಂ ಸಿಂಗ್ ನಿಧನದಿಂದ ಮೈನ್ಪುರಿ ಕ್ಷೇತ್ರ ತೆರವಾಗಿತ್ತು. ಈ ಕ್ಷೇತ್ರಕ್ಕೆ ಡಿ. 5ರಂದು ಮತದಾನ ನಡೆದಿತ್ತು. ಜತೆಗೆ, ಉತ್ತರ ಪ್ರದೇಶದ ಎರಡು ಹಾಗೂ ಒಡಿಶಾ, ರಾಜಸ್ಥಾನ, ಬಿಹಾರ, ಛತ್ತೀಸಗಡ ತಲಾ ಒಂದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಉಪಚುನಾವಣೆ ನಡೆದಿತ್ತು.

ಉತ್ತರಪ್ರದೇಶದ ರಾಂಪುರ್ ಸದರ್ ಮತ್ತು ಖತೌಲಿ, ಒಡಿಶಾದ ಪದಂಪುರ, ರಾಜಸ್ಥಾನದ ಸರ್ದಾರ್ ಶಹರ್, ಬಿಹಾರದ ಕುರ್ಹಾನಿ ಮತ್ತು ಛತ್ತೀಸಗಢದ ಭಾನುಪ್ರತಾಪ್ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.