ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದ್ವಿಪಕ್ಷೀಯ ಮಾತುಕತೆ: ಭಾರತಕ್ಕೆ ಬಂದ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಝು

Published : 6 ಅಕ್ಟೋಬರ್ 2024, 13:32 IST
Last Updated : 6 ಅಕ್ಟೋಬರ್ 2024, 13:32 IST
ಫಾಲೋ ಮಾಡಿ
Comments

ನವದೆಹಲಿ: ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಝು ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಇಂದು(ಭಾನುವಾರ) ದೆಹಲಿಗೆ ಆಗಮಿಸಿದ್ದಾರೆ.

ಪತ್ನಿ, ಮಾಲ್ದೀವ್ಸ್‌ನ ಮೊದಲ ಮಹಿಳೆ ಸಜೀದಾ ಮೊಹಮ್ಮದ್ ಅವರೊಂದಿಗೆ ದೆಹಲಿಗೆ ಆಗಮಿಸಿದ ಮುಯಿಝು ಅವರನ್ನು ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ಕೀರ್ತಿವರ್ಧನ್‌ ಸಿಂಗ್ ಅವರು ಸ್ವಾಗತಿಸಿದರು.

ಅಕ್ಟೋಬರ್ 6ರಿಂದ 10ರವರೆಗಿನ ಭಾರತ ಭೇಟಿ ವೇಳೆ ಮುಯಿಝು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮುಯಿಝು ಅವರು ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಭಾರತಕ್ಕೆ ಭೇಟಿ ನೀಡಿದ್ದರು. ದ್ವಿಪಕ್ಷೀಯ ಸಂಬಂಧ ಮಾತುಕತೆಗೆ ಇದು ಅವರ ಮೊದಲ ಭೇಟಿಯಾಗಿದೆ.

ಈ ವೇಳೆ ಮುಯಿಝು ಅವರು ಬೆಂಗಳೂರಿಗೂ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT