ಮುಂಬೈ: ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರು ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ಸೋಮವಾರ ತಿರಸ್ಕರಿಸಿತು.

ಪುರೋಹಿತ್ ಮತ್ತು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿ ಆರು ಜನರು ಈ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. 2008ರ ಸೆಪ್ಟೆಂಬರ್ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ಪ್ರಕರಣದ ಎಲ್ಲ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಸಿಆರ್ಪಿಸಿಯ ಸಂಬಂಧಿಸಿದ ಸೆಕ್ಷನ್ ಅಡಿ ತಮ್ಮನ್ನು ಶಿಕ್ಷೆಗೊಳಪಡಿಸಲು ಅವಕಾಶವಿಲ್ಲ ಎಂದು ಪುರೋಹಿತ್ ಪ್ರತಿಪಾದಿಸಿದ್ದರು.

ಆದರೆ ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಪ್ರಕಾಶ್ ನಾಯಕ್ ಅವರ ಪೀಠವು ಪುರೋಹಿತ್ ಅವರ ಮನವಿಯನ್ನು ತಿರಸ್ಕರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.