ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಖರ್ಗೆಯವರಿಗೆ 7,897 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಶಶಿ ತರೂರ್ ಅವರಿಗೆ 1,000 ಮತಗಳು ಬಂದಿವೆ. 416 ಮತಗಳನ್ನು ತಿರಸ್ಕರಿಸಲಾಗಿದೆ.6,897 ಮತಗಳ ಅಂತರದಲ್ಲಿ ಖರ್ಗೆ, ತರೂರ್ ಅವರನ್ನು ಸೋಲಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷಗಾದಿಗೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆದಿತ್ತು. ಇಂದು ಬೆಳಿಗ್ಗೆಯಿಂದ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಮತ ಎಣಿಕೆ ಕಾರ್ಯ ನಡೆಯತ್ತಿತ್ತು.

ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ. ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.