ಒಬ್ಬ ಮುಖ್ಯಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು? ವಿರೋಧ ಪಕ್ಷಗಳು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅವಿಭಾಜ್ಯ ಅಂಗ ಎಂಬುದನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ವಿಪಕ್ಷಗಳ ನಾಯಕರ ದನಿ ಅಡಗಿಸುವುದಕ್ಕಾಗಿ ಅವರನ್ನು ಶತ್ರುಗಳಂತೆ ನೋಡಬಾರದು ಎಂ.ಕೆ.ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಒಪ್ಪಲಾಗದು. ಹತ್ತು ವರ್ಷಗಳ ಹಿಂದೆ ರಚನೆಯಾದ ನೀತಿ ಆಯೋಗ ಸದ್ಯ ಪ್ರಧಾನಿ ಕಚೇರಿಯ ಭಾಗವೇ ಆಗಿದೆ. ಒಕ್ಕೂಟ ವ್ಯವಸ್ಥೆಯ ಆಶಯವನ್ನು ಸಾಕಾರಗೊಳಿಸುವಲ್ಲಿ ಆಯೋಗ ವಿಫಲವಾಗಿದೆ.
-ಜೈರಾಮ್ ರಮೇಶ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಹಲವು ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿರುವುದು ಸರಿಯಾಗಿಯೇ ಇದೆ. ಕೇಂದ್ರ ಸರ್ಕಾರ ಕೆಲ ಕ್ರಮಗಳು ಇಂತಹ ನಿರ್ಧಾರಕ್ಕೆ ಕಾರಣ
-ಡಿ.ರಾಜಾ ಸಿಪಿಐ ಪ್ರಧಾನ ಕಾರ್ಯದರ್ಶಿ
ವಿಕಸಿತ ಭಾರತ@2047 ನನಸು ಮಾಡುವುದಕ್ಕೆ ಕೇಂದ್ರ ಹಾಗೂ ಎಲ್ಲ ರಾಜ್ಯಗಳ ನಡುವೆ ಸಹಕಾರ ಸಾಮೂಹಿಕ ಪ್ರಯತ್ನ ಅಗತ್ಯ
-ನರೇಂದ್ರ ಮೋದಿ, ಪ್ರಧಾನಿ
ದೇಶದ ಅಭಿವೃದ್ಧಿ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ರಾಜ್ಯ ಸರ್ಕಾರಗಳು ತಮ್ಮ ಸಂಪೂರ್ಣ ಬೆಂಬಲ ನೀಡಬೇಕು. ಈ ರೀತಿಯ ರಾಜಕಾರಣ ನಡೆಯಬಾರದು.