ಬಲ್ಲಿಯಾ (ಉತ್ತರ ಪ್ರದೇಶ): ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ವಿರುದ್ಧ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾದೇವಿ ಧ್ವನಿ ಎತ್ತಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪಿಟಿಐನೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ' ಎಂದು ದೂರಿದ್ದಾರೆ.
.ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಕೊಲೆ: ಐಎಂಎ 24 ತಾಸು ಮುಷ್ಕರ.
ಆಗಸ್ಟ್ 9ರಂದು ಕೋಲ್ಕತ್ತದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಖಂಡಿಸಿ ದೇಶದಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಮಮತಾ ಅವರು ಸಾರ್ವಜನಿಕರನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆಶಾದೇವಿ ಹೇಳಿದ್ದಾರೆ.

ಈ ಪ್ರಕರಣದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಮಮತಾ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ, ಅವರು ಸ್ವತಃ ಮಹಿಳೆ. ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಯಾಲಯಗಳು ಅತ್ಯಾಚಾರಿಗಳನ್ನು ಶೀಘ್ರ ಶಿಕ್ಷೆಗೆ ಗುರಿಪಡಿಸುವವರೆಗೆ ಇಂತಹ ಕ್ರೌರ್ಯಗಳು ದೇಶದ ವಿವಿಧ ಭಾಗಗಳಲ್ಲಿ ಪ್ರತಿದಿನ ನಡೆಯುತ್ತಲೇ ಇರುತ್ತವೆ ಎಂದು ಆಶಾದೇವಿ ಹೇಳಿದ್ದಾರೆ.
.ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರ ಮುಷ್ಕರ; ರೋಗಿಗಳ ಪರದಾಟ.
ಕೋಲ್ಕತ್ತದ ವೈದ್ಯಕೀಯ ಕಾಲೇಜಿನಲ್ಲೇ ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲ, ಅವರ ವಿರುದ್ಧ ಇಂತಹ ಅಮಾನುಷ ಕೃತ್ಯಗಳು ನಡೆಯುತ್ತಿವೆ ಎಂದರೆ, ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸ್ಥಿತಿ ಹೇಗಿದೆ ಎಂಬುದನ್ನು ಯಾರು ಬೇಕಾದರೂ ಅರ್ಥಮಾಡಿಕೊಳ್ಳಬಹುದು ಎಂದೂ ಅವರು ನುಡಿದಿದ್ದಾರೆ.

ಅತ್ಯಾಚಾರ,ಹತ್ಯೆಗೊಳಗಾದ ವೈದ್ಯೆಗೆ ನ್ಯಾಯ ಒದಗಿಸಲು ಆಗ್ರಹಿಸಿ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಶುಕ್ರವಾರ ಮೌಲಾಲಿಯಿಂದ ಡೋರಿನಾಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ತನಿಖೆಯಲ್ಲಿನ ಲೋಪವನ್ನು ಉಲ್ಲೇಖಿಸಿ, ಕಲ್ಕತ್ತ ಹೈಕೋರ್ಟ್ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿದೆ.
.ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಮುಷ್ಕರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.