ಕೋಲ್ಕತ್ತ: ಪೆಗಾಸಸ್ ವಿವಾದದ ಕುರಿತಂತೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರತಿಪಕ್ಷ ನಾಯಕರು, ಸಚಿವರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದೇವೇಳೆ, ಪ್ರತಿಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ನ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಸಚಿವರು, ಪ್ರತಿಪಕ್ಷ ನಾಯಕರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ. ಬಿಜೆಪಿ ಪ್ರಜಾಪ್ರಭುತ್ವವನ್ನು ಪ್ರೀತಿಸುತ್ತಿದ್ದರೆ ಅದು ದೇಶದ ಒಕ್ಕೂಟ ವ್ಯವಸ್ಥೆಯನ್ನು ಉರುಳಿಸುವ ಯತ್ನ ಮಾಡುತ್ತಿರಲಿಲ್ಲ. ಪ್ರತಿಪಕ್ಷಗಳ ಆಳ್ವಿಕೆ ಇರುವ ರಾಜ್ಯಗಳಲ್ಲಿ ಬಜೆಪಿ ವಿರೋಧಿ ರಂಗ ಸ್ಥಾಪಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಯುದ್ಧಕ್ಕೆ ತಯಾರಾಗಲು ಇದು ಸರಿಯಾದ ಸಮಯ.’ ಎಂದು ಮಮತಾ ಹೇಳಿದರು.

‘ಪ್ರಜಾಪ್ರಭುತ್ವವನ್ನು ಕಾಪಾಡುವ ಬದಲು ಬಿಜೆಪಿ ದೇಶದಾದ್ಯಂತ ಬೇಹುಗಾರಿಕೆ ನಡೆಸುತ್ತಿದೆ’ ಎಂದು ಮಮತಾ ವಾಗ್ದಾಳಿ ನಡೆಸಿದ್ದಾರೆ.

ತನ್ನ ಫೋನ್ ಟ್ಯಾಪ್ ಆಗುತ್ತಿರುವುದರಿಂದ ಯಾವುದೇ ಪ್ರತಿಪಕ್ಷದ ನಾಯಕರಿಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಟಿಎಂಸಿ ವರಿಷ್ಠೆ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.