ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

3 ಕ್ರಿಮಿನಲ್ ಕಾನೂನುಗಳ ಜಾರಿ ಮುಂದೂಡಿ: ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಪತ್ರ

Published 21 ಜೂನ್ 2024, 7:37 IST
Last Updated 21 ಜೂನ್ 2024, 7:37 IST
ಅಕ್ಷರ ಗಾತ್ರ

ನವದೆಹಲಿ: ಜುಲೈ 1ರಿಂದ ಜಾರಿ ಮಾಡಲಾಗುತ್ತದೆ ಎನ್ನಲಾಗುತ್ತಿರುವ ಮೂರು ಕ್ರಿಮಿನಲ್ ಕಾನೂನುಗಳನ್ನು ಮುಂದೂಡುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕ್ರಿಮಿನಲ್ ಕಾನೂನುಗಳ ಜಾರಿ ಮುಂದೂಡಿಕೆಯು ಹೊಸ ಸಂಸತ್ತಿನಲ್ಲಿ ಈ ಕಾನೂನುಗಳ ಕುರಿತಾದ ಪುನರ್‌ಪರಿಶೀಲನೆಗೆ ಅವಕಾಶ ಕಲ್ಪಿಸುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ಉದ್ದೇಶಿಸಿರುವ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳು 1872ರಲ್ಲಿ ಜಾರಿಗೆ ಬಂದಿರುವ ವಸಾಹತುಶಾಹಿ ಕಾಲದ ಭಾರತೀಯ ದಂಡ ಸಂಹಿತೆ , ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳಿಗೆ ಪರ್ಯಾಯವಾಗಿವೆ.

ದೇಶದ ಜನರಿಗೆ ಅತ್ಯಂತ ವೇಗವಾಗಿ ನ್ಯಾಯ ಒದಗಿಸುವುದು. ನ್ಯಾಯಾಂಗ ಮತ್ತು ನ್ಯಾಯಾಲಯಗಳ ನಿರ್ವಹಣಾ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶವನ್ನು ಈ ಹೊಸ ಕಾನೂನುಗಳು ಹೊಂದಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT