ಕೋಲ್ಕತ್ತ: ತಮ್ಮ ಸರ್ಕಾರದ ವಿರುದ್ಧ ನಿತ್ಯ ಪೋಸ್ಟ್ಗಳನ್ನು ಮಾಡಿ ತೊಂದರೆ ಕೊಡುತ್ತಿದ್ದ ಗವರ್ನರ್ ಜಗದೀಪ್ ಧನಕರ್ ಅವರ ಟ್ವಿಟರ್ ಖಾತೆಯನ್ನು ನಿರ್ಬಂಧಿಸಿರುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

ಧನಕರ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಹಲವಾರು ಸಂದರ್ಭಗಳಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಬ್ಯಾನರ್ಜಿ ದೂರಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಧನಕರ್ ಪದಚ್ಯುತಿಗೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.