ಶ್ರೀನಗರ: ಕಳೆದ 24 ವರ್ಷಗಳಿಂದಲೂ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಶಸ್ತ್ರಾಸ್ತ್ರ ಪ್ರಕರಣದ ಆರೋಪಿಯನ್ನು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

1997 ರಿಂದಲೂ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಪೋಲೀಸರ ಕೈಗೆ ಸಿಗದೆ ಪರಾರಿಯಾಗಿದ್ದ ಖಡ್ನಿಯಾರ್ ನಿವಾಸಿ ಬಶೀರ್ ಅಹ್ಮದ್ ಲೋನ್ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸ್ ಪಡೆ ಯಶಸ್ವಿಯಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಆತನನ್ನು ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

1997ರ ಫೆಬ್ರುವರಿ 16ರಂದು ಬಾರಾಮುಲ್ಲಾ ಬಸ್ ನಿಲ್ದಾಣದಲ್ಲಿ ನಾಲ್ಕು ಚೀನೀ ಹ್ಯಾಂಡ್ ಗ್ರೇನೇಡ್ಗಳು ಪತ್ತೆಯಾದ ಬಳಿಕ ಪರಾರಿಯಾಗಿದ್ದ ಆರೋಪಿ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ಧ ನ್ಯಾಯಾಲಯದ ಮುಂದೆ ತ್ವರಿತ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.