ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ 20 ವರ್ಷದ ಜಕೀರ್ ಎಂಬಾತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ದೂರು ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

ಸೋಮವಾರದಂದು ಬಾಂಬ್ ಬೆದರಿಕೆ ಕರೆ ಬಂದಿತ್ತು. ಬಳಿಕ ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಲಾಗಿತ್ತಲ್ಲದೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ಖಚಿತವಾಗಿತ್ತು.

ತನಿಖೆಯಲ್ಲಿ ಉತ್ತರ ಪ್ರದೇಶದ ಹಾಪುರ್ ನಿವಾಸಿ ಜಕೀರ್ ಎಂಬ ವ್ಯಕ್ತಿಯ ಹೆಸರಲ್ಲಿ ಮೊಬೈಲ್ ಸಂಖ್ಯೆ ನೋಂದಾಯಿಸಲಾಗಿದೆ ಎಂದು ಪತ್ತೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.