ಚೆನ್ನೈ: ದೆಹಲಿ– ಚೆನ್ನೈ ನಡುವೆ ಸಂಚರಿಸುವ ಇಂಡಿಗೊ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 43 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರು ಆಧರಿಸಿ, ರಾಜಸ್ಥಾನದ ರಾಜೇಶ್ ಶರ್ಮಾ ಎಂಬ ವ್ಯಕ್ತಿಯನ್ನು ಬುಧವಾರ ಸಂಜೆ ಬಂಧಿಸಲಾಗಿದೆ. ಚೆನ್ನೈನಲ್ಲಿ ನೆಲೆಸಿರುವ ಶರ್ಮಾ ಬುಧವಾರ ದೆಹಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದಾಗ, ನಿದ್ರಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಅಸಭ್ಯವಾಗಿ ಸ್ಪರ್ಶಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶರ್ಮಾ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಹಾಗಾಗಿ, ನಾವು ಆತನನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ದೂರಿನ ಪ್ರಕಾರ, ಮಹಿಳೆ ಮಲಗಿದ್ದಾಗ ಆಕೆಯನ್ನು ಆರೋಪಿ ಅಸಭ್ಯವಾಗಿ ಸ್ಪರ್ಶಿಸಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದ ಸಿಬ್ಬಂದಿ ಮಹಿಳೆಗೆ ಪೊಲೀಸ್ ದೂರು ದಾಖಲಿಸಲು ನೆರವಾಗಿದ್ದಾರೆ. ಶರ್ಮಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಮಾನಯಾನ ಸಂಸ್ಥೆ ಇಂಡಿಗೊ ಈ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.