ಕೋಲ್ಕತ್ತ: ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರೊಬ್ಬರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ರೋಗಿಯನ್ನು ತಪಾಸಣೆ ಮಾಡುವ ವೇಳೆ ವ್ಯಕ್ತಿಯೊಬ್ಬ ವೈದ್ಯರಿಗೆ ನಿಂದಿಸಿದ್ದು, ಬೆದರಿಕೆಯನ್ನೂ ಹಾಕಿದ್ದಾನೆ. ತಕ್ಷಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ರೋಗಿಯು ಚಿಕಿತ್ಸೆಗಾಗಿ ಇನ್ನೊಂದು ಆಸ್ಪತ್ರೆಗೆ ತೆರಳಿದ್ದಾರೆ. ಆರ್.ಜಿ. ಕರ್ ಆಸ್ಪತ್ರೆಯ ವೈದ್ಯರು ದೂರು ದಾಖಲಿಸಿದ ಕಾರಣ ವಶಕ್ಕೆ ಪಡೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ತಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
.ಕೋಲ್ಕತ್ತ: ಮತ್ತೆ ಹೋರಾಟಕ್ಕಿಳಿದ ಕಿರಿಯ ವೈದ್ಯರು.ಕೋಲ್ಕತ್ತ: ಕಿರಿಯ ವೈದ್ಯರಿಂದ ರ್ಯಾಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.