ನವದೆಹಲಿ (ಪಿಟಿಐ): ‘ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದ ನಗರದ ವೈದ್ಯರೊಬ್ಬರನ್ನು ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ’ ಎಂದು ದೆಹಲಿ ಪೊಲೀಸರು ಭಾನುವಾರ ಹೇಳಿದ್ದಾರೆ.

‘ಆರೋಪಿ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದರು. ಈ ವೇಳೆ ಅವರನ್ನು ಬಂಧಿಸಲಾಗಿದೆ. 2022ರ ಅಕ್ಟೋಬರ್ 13ರಂದು ಘಟನೆ ನಡೆದಿತ್ತು.

ಈ ಕುರಿತು ಮಹಿಳೆಯು ಈ ತಿಂಗಳ ಆರಂಭದಲ್ಲಿ ದೆಹಲಿಯ ಕಲ್ಯಾಣ್‌ಪುರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಯು ಬೆಂಗಳೂರಿನಲ್ಲಿ ಇರುವುದು ತನಿಖೆಯಿಂದ ಗೊತ್ತಾಗಿತ್ತು. ಹೀಗಾಗಿ ಪೊಲೀಸರ ತಂಡವೊಂದನ್ನು ಬೆಂಗಳೂರಿಗೆ ಕಳುಹಿಸಲಾಗಿತ್ತು. ಅವರು ಇದೇ 9ರಂದು ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದರು’ ಎಂದು ಮಾಹಿತಿ ನೀಡಿದ್ದಾರೆ.

‘2018ರಲ್ಲಿ ಮಹಿಳೆಗೆ ಆರೋಪಿಯ ಪರಿಚಯವಾಗಿತ್ತು. ಇಬ್ಬರೂ 2020ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.