ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕಾಂಗ್ರೆಸ್ ಮುಖಂಡ ಹರೀಶ್ ರಾವತ್ ಭಾಗವಹಿಸಿದ್ದಕಾರ್ಯಕ್ರಮದಲ್ಲಿ ಚಾಕು ಹಿಡಿದ ವ್ಯಕ್ತಿಯೊಬ್ಬ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ವೇದಿಕೆಗೆ ಏರಿದ ಘಟನೆ ವರದಿಯಾಗಿದೆ.

ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶೀಪುರದಲ್ಲಿ ಘಟನೆ ನಡೆದಿದ್ದು, ಬಳಿಕ ವ್ಯಕ್ತಿಯನ್ನು ಬಂಧಿಸಲಾಗಿದೆ.

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಭಾಷಣ ಮುಗಿಸಿದ ಕೆಲವೇ ನಿಮಿಷಗಳಲ್ಲಿ ಚಾಕು ಹಿಡಿದ ವ್ಯಕ್ತಿ ವೇದಿಕೆಗೆ ಏರಿ ಜೈ ಶ್ರೀರಾಮ್ ಘೋಷಣೆ ಕೂಗಲಾರಂಭಿಸಿದನು. ಕೂಡಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಆತನನ್ನು ಹಿಡಿದು, ಪೊಲೀಸ್ ವಶಕ್ಕೆ ಒಪ್ಪಿಸಿದರು.

ಇದನ್ನೂ ಓದಿ:ಫೆ. 10ರಿಂದ ಮಾ. 7ರವರೆಗೆ ಏಳು ಹಂತಗಳಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ

ಆ ವ್ಯಕ್ತಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ಎಂದು ಕಾಶೀಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರ ಮೋಹನ್ ಸಿಂಗ್ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರಧಾನಿ ಅವರೊಂದಿಗೆ ಮಾತನಾಡಬೇಕೆಂದು ಹೇಳಿ ನಗರದಲ್ಲಿ ಟವರ್ ಮೇಲೆ ಏರಿದ್ದನು ಎಂದು ತಿಳಿಸಿದ್ದಾರೆ.

40ರ ಹರೆಯದ ವ್ಯಕ್ತಿಯ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಹರೀಶ್ ರಾವತ್ ಅವರಲ್ಲಿ ಈ ಕುರಿತು ಕೇಳಿದಾಗ, ತಾವು ಕೂಡ ಗದ್ದಲವನ್ನು ಆಲಿಸಿರುವುದಾಗಿ ತಿಳಿಸಿದ್ದಾರೆ. ಆದರೆ ಬೇರೆ ಕಾರ್ಯಕ್ರಮಕ್ಕೆ ತೆರಳಬೇಕಾಗಿದ್ದರಿಂದ ಅದನ್ನು ನಿರ್ಲಕ್ಷಿಸಿರುವುದಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.