ಅರರಿಯಾ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಜನವರಿ 22ರಂದು ಸ್ಫೋಟಿಸುವುದಾಗಿ ಪೊಲೀಸರಿಗೆ ಕರೆ ಮಾಡಿ ಬೆದರಿಸಿದ್ದ ವ್ಯಕ್ತಿಯನ್ನು ಬಿಹಾರದ ಅರರಿಯಾದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದರು.

ಇಂತೆಖಾಬ್ ಆಲಂ (21) ಬಂಧಿತ ವ್ಯಕ್ತಿ. ಈತ ಜನವರಿ 19ರಂದು 112 ತುರ್ತು ಸಹಾಯ ಸಂಖ್ಯೆಗೆ ಕರೆ ಮಾಡಿ, ‘ನನ್ನ ಹೆಸರು ಛೋಟಾ ಶಕೀಲ್. ನಾನು ದಾವೂದ್ ಇಬ್ರಾಹಿಂ ಸಹಚರ. ಜ.22ರಂದು ರಾಮಮಂದಿರವನ್ನು ಸ್ಫೋಟಿಸುತ್ತೇನೆ’ ಎಂದು ಹೇಳಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

‘ಈತನಿಗೆ ಅಪರಾಧ ಹಿನ್ನೆಲೆ ಇಲ್ಲ. ಮಾನಸಿಕ ಅಸ್ವಸ್ಥನಂತೆ ಕಾಣುತ್ತಾನೆ. ಆದರೆ ಸೂಕ್ಷ್ಮ ವಿಷಯವಾಗಿರುವ ಕಾರಣ ಪ್ರಕರಣ ದಾಖಲಿಸಿಕೊಂಡು, ಮೊಬೈಲ್ ವಶಕ್ಕೆ ಪಡೆಯಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.