ಅಹ್ಮದಾಬಾದ್/ಮುಂಬೈ: ಕಾಂಗ್ರೆಸ್ ವಕ್ತಾರೆ ಪ್ರಿಯಾಂಕ ಚತುರ್ವೇದಿ ಅವರ 10 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗುವುದಾಗಿ ಟ್ವಿಟರ್‌ನಲ್ಲಿ ಬೆದರಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಹ್ಮದಾಬಾದ್‌ನ ಬಾವಲಾದಿಂದ ಗಿರೀಶ್ ಮಹೇಶ್ವರಿಯನ್ನು (36) ಬುಧವಾರ ರಾತ್ರಿ ಬಂಧಿಸಲಾಗಿದ್ದು, ಆತನನ್ನು ಮುಂಬೈನ ದಿಂಡೋಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬೆದರಿಕೆ ಕುರಿತುಪ್ರಿಯಾಂಕ ಅವರು ದೂರು ದಾಖಲಿಸಿದ್ದರು.

ಕೇಂದ್ರ ಗೃಹಸಚಿವಾಲಯದ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಟ್ವಿಟರ್ ಬಳಕೆದಾರ ‘@GirishK1605’ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 509 (ಮಹಿಳೆಯ ಘನತೆಗೆ ದಕ್ಕೆ ಉಂಟುಮಾಡುವ ಮಾತು, ಸನ್ನೆ), ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.