ಗುರುಗ್ರಾಮ: ಹರಿಯಾಣದ ನೂಹ್ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮೆರವಣಿಗೆ ವೇಳೆ ಪ್ರಾರಂಭವಾದ ಘರ್ಷಣೆ ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿದೆ.

ಗುರುಗ್ರಾಮದ ಸೆಕ್ಟರ್ 57ರಲ್ಲಿ ಮಸೀದಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, 26 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಪೊಂದು ಬೆಂಕಿ ಹಂಚಿದ್ದು, ಇದರಲ್ಲಿ ಇಬ್ಬರು ಗಾಯಗೊಂಡಿದ್ದರು. ಆ ಪೈಕಿ ಓರ್ವ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಹಾರ ಮೂಲದ ಸಾದ್ ಎಂಬವರೇ ಮೃತಪಟ್ಟವರು. ನೂಹ್‌ನಲ್ಲಿ ಘರ್ಷಣೆ ಪ್ರಾರಂಭವಾದ ಬಳಿಕ ಈ ಸಂಬಂಧ ನಡೆದ ನಾಲ್ಕನೇ ಸಾವು ಇದಾಗಿದೆ.

ಸೆಕ್ಟರ್ 57ರಲ್ಲಿರುವ ಅಂಜುಮನ್ ಮಸೀದಿಗೆ ಮಧ್ಯರಾತ್ರಿ ಗುಂಪು ತಲಿಪಿದ್ದು, ಗುಂಪಿನಲ್ಲಿದ್ದವರು ಮಸೀದಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೂಹ್‌ನಲ್ಲಿ ಘರ್ಷಣೆ

ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದರು.

ಘಟನೆಯಲ್ಲಿ ಗೃಹರಕ್ಷಕ ದಳದ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳಿಗೂ ಹಾನಿಯಾಗಿದೆ. ಡಿಎಸ್‌ಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.