ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ 25 ವರ್ಷದ ಯುವಕನೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ನಾಸಿಕ್‌ನಿಂದ 60 ಕಿಮೀ ದೂರದಲ್ಲಿನ ಚಾಂದ್‌ವಾಡ್ ಟೋಲ್ ಪ್ಲಾಜಾದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಟೋಲ್ ಪ್ಲಾಜಾದ ಕಾರ್ಮಿಕನೊಬ್ಬ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾನೆ. ಈ ಬಗ್ಗೆ ಟೋಲ್ ಪ್ಲಾಜಾದ ವ್ಯವಸ್ಥಾಪಕರು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಕಾರ್ಮಿಕನನ್ನು ಶಬದ್ ಶಫಕತ್ ಖುರೇಶಿ ಎಂದು ಗುರುತಿಸಲಾಗಿದೆ. ಆರೋಪಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಪೊಲೀಸ್ ಠಾಣೆಯೆದುರು ಹಲವರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಚಾಂದ್‌ವಾಡ್ ಪ್ರದೇಶದ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.