ನಾಗ್ಪುರ: 23 ವರ್ಷದ ವ್ಯಕ್ತಿಯೊಬ್ಬ ತನ್ನೊಂದಿಗೆ ವೈಮನಸ್ಯ ಹೊಂದಿದ್ದ ಪ್ರೇಯಸಿಯನ್ನು ನೇಣು ಹಾಕಲು ಯತ್ನಿಸಿರುವುದಾಗಿ ಸಿಟಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೊರಾಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆದೇಶ್ ದುರ್ಗಾದಾಸ್ ತಿರ್ಪುಡೆ (23) ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನದ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದ ನಂತರ ತಿರ್ಪುಡೆಯೊಂದಿಗೆ ಆತನ ಪ್ರೇಯಸಿ ಮಾತು ನಿಲ್ಲಿಸಿದ್ದಳು. ಇದರಿಂದ ಆತ ಕೋಪಗೊಂಡಿದ್ದ.

'ಶುಕ್ರವಾರ ಆಕೆಯ ಮನೆಗೆ ನುಗ್ಗಿದ ಆತ, ಆಕೆಯ ಕೆನ್ನೆಗೆ ಬಾರಿಸಿದ್ದಾನೆ ಮತ್ತು ದುಪ್ಪಟ್ಟಾದಿಂದ ಸೀಲಿಂಗ್ ಫ್ಯಾನಿಗೆ ನೇಣು ಬಿಗಿಯಲು ಯತ್ನಿಸಿದ್ದಾರೆ. ಅದೃಷ್ಟವಶಾತ್, ಯುವತಿಯ ಸಂಬಂಧಿ ಸ್ಥಳಕ್ಕೆ ಭೇಟಿ ನೀಡಿದಾಗ ಅವಘಡ ತಪ್ಪಿದೆ. ಈ ವೇಳೆ ತಿರ್ಪುಡೆ ಅಲ್ಲಿಂದ ಪರಾರಿಯಾಗಿದ್ದಾನೆ. ಮುಂದಿನ ತನಿಖೆ ಕೈಗೊಳ್ಳಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.